ETV Bharat / state

ಮುಸ್ಲಿಂ ಸಮುದಾಯದ ಆ ಕಟುಕ ಬಿಜೆಪಿ ಕಾರ್ಯಕರ್ತನಾಗಲು ಸಾಧ್ಯವಿಲ್ಲ: ಸಚಿವ ಬೈರತಿ ಬಸವರಾಜ್ - congress statement on Rajasthan murder case

ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣ ಪ್ರಮುಖ ಆರೋಪಿ ರಿಯಾಜ್ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರಾಗಿದ್ದು, ಬಿಜೆಪಿ ನಾಯಕರೊಂದಿಗೆ ಸಾಕಷ್ಟು ಫೋಟೋದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದರು. ಇದಕ್ಕೆ ಬೈರತಿ ಬಸವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

Byrati Basavaraj
ಬೈರತಿ ಬಸವರಾಜ್
author img

By

Published : Jul 3, 2022, 8:01 PM IST

ದಾವಣಗೆರೆ: ಮುಸ್ಲಿಂ ಸಮುದಾಯದಲ್ಲೂ ಸಜ್ಜನರು ಇದ್ದಾರೆ. ಆದ್ರೆ ಸಮುದಾಯದ ಒಬ್ಬ ಕಟುಕ ನಮ್ಮ ಬಿಜೆಪಿ ಕಾರ್ಯಕರ್ತನಾಗಲು ಸಾಧ್ಯವಿಲ್ಲ ಎಂದು ಸಚಿವ ಬೈರತಿ ಬಸವರಾಜ್ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ರಾಜಸ್ಥಾನದ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡಿದ ಪ್ರಮುಖ ಆರೋಪಿಯು ಬಿಜೆಪಿ ಕಾರ್ಯಕರ್ತ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ಬೈರತಿ ಬಸವರಾಜ್ ಪ್ರತಿಕ್ರಿಯೆ

ಕಾಂಗ್ರೆಸ್​ನವರು ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಆ ಕಟುಕನನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತನನ್ನಾಗಿ ಮಾಡಲು ಸಾಧ್ಯವಿಲ್ಲ. ಇಂಥಹವರಿಗೆ ಬಿಜೆಪಿ ಸದಸ್ಯತ್ವ ಕೊಡುವುದು ನಮ್ಮ ಪಕ್ಷದ ಜಾಯಮಾನದಲ್ಲೇ ಇಲ್ಲ. ಹಂತಕ ಬಿಜೆಪಿಯವನು ಎಂದು ಹೇಳುತ್ತಿರುವ ಕಾಂಗ್ರೆಸ್​ಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಸಚಿವ ಬೈರತಿ ಕಿಡಿಕಾರಿದರು.

ಇದನ್ನೂ ಓದಿ: ನಾಳೆಯಿಂದ ಸಂಪೂರ್ಣವಾಗಿ ತ್ಯಾಜ್ಯ ವಿಲೇವಾರಿ ಸ್ಥಗಿತ: ಪೌರಕಾರ್ಮಿಕರ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.