ETV Bharat / state

ಎಂಟಿಬಿ, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವ ವಿಚಾರ: ಸಿಎಂ ನಿರ್ಧಾರವೇ ಅಂತಿಮ ಎಂದ ಭೈರತಿ

ಸಚಿವಾಕಾಂಕ್ಷಿಗಳಾದ ಎಂಟಿಬಿ ನಾಗರಾಜ್ ಮತ್ತು ವಿಶ್ವನಾಥ್​ಗೆ ಸಚಿವ ಸ್ಥಾನ ನೀಡಬೇಕೋ ಅಥವಾ ಬೇಡವೋ ಎಂದು ಸಿಎಂ ತೀರ್ಮಾನಿಸುತ್ತಾರೆ. ಇದು ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಭೈರತಿ ಬಸವರಾಜ್​ ಸ್ಪಷ್ಟಪಡಿಸಿದ್ದಾರೆ.

Bairathi Basavraj
ಭೈರತಿ ಬಸವರಾಜ್ ಹೇಳಿಕೆ
author img

By

Published : Nov 13, 2020, 2:32 PM IST

ದಾವಣಗೆರೆ: ಎಂಟಿಬಿ ನಾಗರಾಜ್, ವಿಶ್ವನಾಥ್​ಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಈ ವಿಚಾರದಲ್ಲಿ ಸಿಎಂ ಅವರದ್ದೇ ಪರಮಾಧಿಕಾರ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

ಭೈರತಿ ಬಸವರಾಜ್ ಹೇಳಿಕೆ

ಚನ್ನಗಿರಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನೀಡಿರುವ ಭರವಸೆ ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ. ಈ ವಿಚಾರದಲ್ಲಿ ಮಾತು ತಪ್ಪಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಕಾರಣರಾದ ಸಿ. ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮ ಎಂದರು.

ಪ್ರತಿ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ನ್ಯಾಯ ಸಮ್ಮತವಾಗಿದೆ, ಇದರಲ್ಲಿ ತಪ್ಪೇನಿಲ್ಲ. ದಾವಣಗೆರೆ ಜಿಲ್ಲೆಯಲ್ಲಿ ಎಂ. ಪಿ. ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್ ಸೇರಿದಂತೆ ಐವರು ಶಾಸಕರಿದ್ದಾರೆ. ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹ ಸರಿಯಾಗಿದೆ. ಈ ಸಂಬಂಧ ಸಂಸದ ಜಿ‌.ಎಂ‌.ಸಿದ್ದೇಶ್ವರ್ ಹಾಗೂ ನಾನು, ಸಿಎಂ ಜೊತೆ ಮಾತುಕತೆ ನಡೆಸಿ ಒತ್ತಡ ಹೇರುವುದಾಗಿ ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು‌.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.