ದಾವಣಗೆರೆ: ಮಹಾನಗರ ಪಾಲಿಕೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ತರಕಾರಿಗಳ ದರ ನಿಗದಿ ಮಾಡಿದ್ದು, ಹೆಚ್ಚು ಹಣ ವಸೂಲಿ ಮಾಡಿದರೆ ಅಂಗಡಿಗಳ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಅಜಯ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲಾಕ್ಡೌನ್ ದುರುಪಯೋಗ ಮಾಡಿಕೊಂಡು ತರಕಾರಿಗಳನ್ನ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ನಾವು ನೀಡುವ ದಿನನಿತ್ಯದ ಗರಿಷ್ಠ ಮಾರಾಟ ದರದ ಪ್ರತಿ ತೋರಿಸಿದ್ರೆ ಮಾತ್ರ ತರಕಾರಿ ಖರೀದಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅಂಗಡಿ, ತಳ್ಳೋ ಗಾಡಿಗಳು ಸೇರಿದಂತೆ ತರಕಾರಿ ಮಾರಾಟ ಮಾಡುವ ಎಲ್ಲರಿಗೂ ಇದು ಅನ್ವಯಿಸುತ್ತದೆ. ತರಕಾರಿಯನ್ನ ಎಪಿಎಂಸಿ ಮಾರುಕಟ್ಟೆಯಿಂದ ನೀಡಲಾಗುತ್ತದೆ. ಒಂದು ವೇಳೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ನಮ್ಮ ಗಮನಕ್ಕೆ ತನ್ನಿ, ಕ್ರಮ ಕೈಗೊಳ್ಳುತ್ತೇವೆ ಎಂದರು.