ದಾವಣಗೆರೆ: ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಪ್ರಾಣಭಯದಿಂದ ಇದ್ದ ಜನ್ರು ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಚಿರತೆ ಸೆರೆಯಾಗಿದ್ದು, ಕಳೆದ 4 ದಿನಗಳಿಂದ ಜನರ ನೆಮ್ಮದಿ ಕೆಡಿಸಿತ್ತು. ಅರಣ್ಯ ಇಲಾಖೆ ಹಾಗು ಸ್ಥಳೀಯರ ಕಾರ್ಯಾಚರಣೆಯಿಂದ ಚಿರತೆಯನ್ನ ಸೆರೆ ಹಿಡಿಯಲಾಗಿದೆ.
ಕಳೆದ 4 ದಿನಗಳಿಂದ ಸ್ಥಳೀಯರಿಗೆ ಪ್ರತ್ಯಕ್ಷವಾಗುತ್ತಿದ್ದ ಚಿರತೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಜಮೀನುಗಳಿಗೆ ತೆರಳುವ ರೈತರು ಭಯಭೀತರಾಗಿದ್ದರು.