ದಾವಣಗೆರೆ: ಪ್ಯಾಸೆಂಜರ್ ಆಟೋ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಹರಿಹರ ತಾಲೂಕಿನಲ್ಲಿ ಕಾರು - ಆಟೋ ಅಪಘಾತ
ಜಿಲ್ಲೆಯ ಹರಿಹರ ತಾಲೂಕಿನ ಬ್ಯಾಲದ ಹಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು, ಚನ್ನಬಸಮ್ಮ (60), ಗದಿಗಪ್ಪ(40) ಮೃತಪಟ್ಟಿದ್ದಾರೆ. ಕುಂಬಳೂರಿನಿಂದ ಹರಿಹರದ ಕಡೆಗೆ ಬರುತ್ತಿದ್ದ ಆಟೋ ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗದಿಗೇಶ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇತ್ತ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮದ್ಯೆ ವೃದ್ದೆ ಕೊನೆಯುಸಿರೆಳೆದಿದ್ದಾರೆ.
ಓದಿ: ಪತ್ನಿ ಇಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದ ಪತಿ ನೇಣಿಗೆ ಶರಣು
ಈ ಭೀಕರ ಅಪಘಾತದಲ್ಲಿ 3 ಜನರಿಗೆ ಗಂಭೀರ ಗಾಯಗಳಾಗಿದ್ದು, ಹರಿಹರ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.