ದಾವಣಗೆರೆ: ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಶಾಸಕರ ಒತ್ತಡ ಹೆಚ್ಚಾಗುತ್ತಿದೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಈಗಾಗಲೇ ಶಾಸಕರು ಸಿಎಂ ನಿವಾಸದಲ್ಲಿ ಠಿಕಾಣಿ ಹೂಡಿದ್ದಾರೆ. ಇತ್ತ ದಾವಣಗೆರೆಯಲ್ಲಿ ಛಲವಾದಿ ಮಹಾಸಭಾ ಶಾಸಕ ನೆಹರು ಓಲೇಕಾರ್ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿಯವರು ನೆಹರು ಓಲೇಕಾರ್ಗೆ ಸಚಿವ ಸ್ಥಾನ ನೀಡುವಂತೆ ಛಲವಾದಿ ಮಹಾಸಭಾ ವತಿಯಿಂದ ಮನವಿ ಮಾಡಲಾಗಿದೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೇಕರ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಸಾಕಷ್ಟು ತಿಳಿದುಕೊಂಡಿದ್ದಾರೆಂದು ಸಮುದಾಯದ ಮುಖಂಡರು ತಿಳಿಸಿದರು.
ಛಲವಾದಿ ಸಮಾಜದಿಂದ ನಾಲ್ಕು ಜನ ಶಾಸಕರು ಬಿಜೆಪಿಯಲ್ಲಿದ್ದು, ಆದರೆ ಬಿಜೆಪಿ ಸರ್ಕಾರ ಬಂದಾಗಿನಿಂದ ಒಬ್ಬರಿಗೂ ಸಚಿವ ಸ್ಥಾನ ನೀಡಿಲ್ಲವಂತೆ, ಈ ಬಾರಿಯಾದರೂ ಸಚಿವ ಸಂಪುಟದಲ್ಲಿ ನೆಹರು ಓಲೇಕಾರ್ ಅವರನ್ನು ಸಚಿವರನ್ನಾಗಿ ಮಾಡಿ ಎಂದು ಒತ್ತಾಯಿಸಿದರು.
ಈ ಬಾರಿಯೂ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವುದಾಗಿ ಛಲವಾದಿ ಮಹಾಸಭಾ ಎಚ್ಚರಿಕೆ ನೀಡಿತು.