ದಾವಣಗೆರೆ: ಚನ್ನಗಿರಿ ಮತ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಸೇರಿ 8 ಜನ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ.
ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಪತ್ನಿ ಪುತ್ರ ಮಲ್ಲಿಕಾರ್ಜುನ, ಶಾಸಕರ ಆಪ್ತಸಹಾಯಕ, ಮನೆಗೆಲಸದವರು ಸೇರಿ ಒಟ್ಟು 8 ಜನರಿಗೆ ಸೋಂಕು ತಗುಲಿದೆ.
ಕೊರೊನಾ ರೋಗಲಕ್ಷಣಗಳು ಕಂಡುಬಂದ ಬೆನ್ನಲ್ಲೇ ಕುಟುಂಬಸ್ಥರು ಹೋಮ್ ಐಸೋಲೆಷನ್ ಗೆ ಒಳಗಾದರು. ಶಾಸಕ ಮಾಡಾಳು ಪುತ್ರ ಮಲ್ಲಿಕಾರ್ಜುನ ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಹೋಗಿದ್ದರು.
ಈ ವೇಳೆ ಮನೆಗೆ ವಾಪಸ್ ಬಂದಾಗ ಕೊರೊನಾ ಸೋಂಕು ಇರೋದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮನೆಯವರನ್ನೆಲ್ಲ ಟೆಸ್ಟ್ ಗೆ ಒಳಪಡಿಸಿದಾಗ ಸೋಂಕು ಇರೋದು ತಿಳಿದುಬಂದಿದೆ.
ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದ ಜನರನ್ನು ಹಾಗು ಕಾರ್ಯಕರ್ತರನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಪತ್ತೆ ಹಚ್ಚಬೇಕಾಗಿದೆ.