ETV Bharat / state

ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ: ಸಿಎಂ ಬೊಮ್ಮಾಯಿ - davanagere

ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಏಪ್ರಿಲ್​ ಮೊದಲನೇ ವಾರದಲ್ಲಿ ಬಹುತೇಕ ಹೊರಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

chief-minister-bommai-talks-about-siddaramaiah
ಸಿದ್ದರಾಮಯ್ಯ ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಅವರ ತೀರ್ಮಾನ, ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ: ಸಿಎಂ ಬೊಮ್ಮಾಯಿ
author img

By

Published : Mar 25, 2023, 10:58 PM IST

Updated : Mar 25, 2023, 11:06 PM IST

ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ: ಸಿಎಂ ಬೊಮ್ಮಾಯಿ

ದಾವಣಗೆರೆ: ಸಿದ್ದರಾಮಯ್ಯ ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಅದು ಅವರ ತೀರ್ಮಾನ, ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ, ಇದರ ಬಗ್ಗೆ ಕಾಮೆಂಟ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಮಹಾಸಂಗಮ ಸಮಾವೇಶದ ಬಳಿಕ ಮಾತನಾಡಿದ ಅವರು, ‘‘ನಮ್ಮ ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಮಹಾಸಂಗಮ‌ ಕಾರ್ಯಕ್ರಮ ನಡೆದಿದೆ, ವಿಜಯ ಸಂಕಲ್ಪ ಯಾತ್ರೆ ದಿಗ್ವಿಜಯ ಯಾತ್ರೆಯಾಗಿ ಪರಿವರ್ತನೆಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿದ್ದರಿಂದ ನಿರೀಕ್ಷೆಗೂ ಮೀರಿ ಜನರು ಕಾರ್ಯಕ್ರಮದಲ್ಲಿ‌ ಸೇರಿದ್ದರು. ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯಲಿದೆ. ಸಿದ್ದರಾಮಯ್ಯ ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಅದು ಅವರ ತೀರ್ಮಾನ. ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು.

ರಾಹುಲ್ ಗಾಂಧಿ ಯಾವ ತಪ್ಪು ಎತ್ತಿ ಹಿಡಿದಿದ್ದಾರೆ. ವಿದೇಶಗಳಿಗೆ ಹೋಗಿ ಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ, ಯಾವುದೇ ವ್ಯಕ್ತಿಯ ಉಪನಾಮ ಹಿಡಿದುಕೊಂಡು ಒಂದು ಸಮುದಾಯವನ್ನು ಅವಹೇಳನ ಮಾಡುವುದು ಒಬ್ಬ ರಾಜಕಾರಣಿಯಾದವರಿಗೆ ಸರಿಯೇ? ಒಬ್ಬ ಬಸವರಾಜ ಕಳ್ಳರು ಅಂದ್ರೇ ಎಲ್ಲಾ ಬಸವರಾಜ ಕಳ್ಳರೆಂದು ಹೇಳಕಾಗುತ್ತಾ, ಜನಪ್ರತಿನಿಧಿಯಾದವರಿಗೆ ಅಷ್ಟು ಪ್ರಬುದ್ಧತೆ ಇಲ್ಲದಿದ್ದರೆ ಹೇಗೆ, ಅವರಿಗೆ ಸಾಮಾನ್ಯ ಜ್ಞಾನ ಇಲ್ಲ. ತಪ್ಪು ಮಾಡಿದ್ದಕ್ಕೆ ನ್ಯಾಯಾಲಯ ತೀರ್ಪು ನೀಡಿದೆ, 75 ವರ್ಷದ ಇತಿಹಾಸದಲ್ಲಿ ಈ ರೀತಿ ಯಾರು ಮಾತನಾಡಿಲ್ಲ, ಇದು ದೇಶ ವಿರೋಧಿ ಅಪ್ರಬುದ್ಧ ಹೇಳಿಕೆ ಎಂದು ಹೇಳಿದರು.

ಇನ್ನು ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಏಪ್ರಿಲ್​ ಮೊದಲನೇ ವಾರದಲ್ಲಿ ಬಹುತೇಕ ಹೊರಬರಲಿದೆ. ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಗೊತ್ತಿರುವ ಹೆಸರುಗಳೇ ಇವೆ. ಆಶ್ಚರ್ಯಕರವಾಗಿರುವುದೇನು ಇಲ್ಲ, ಈ 120 ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ನಮ್ಮ ಪ್ರಬಲವಾದ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದರು.

ಡಬಲ್ ಇಂಜಿನ್ ಸರ್ಕಾರವನ್ನು ಮರಳಿ ತರಲು ಕರ್ನಾಟಕ ನಿರ್ಧರಿಸಿದೆ- ಪ್ರಧಾನಿ ನರೇಂದ್ರ ಮೋದಿ: ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ಬಳಿಯಿರುವ ವಿಶಾಲ ಮೈದಾನದಲ್ಲಿ ಆಯೋಜಿಸಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದ ಮಹಾಸಂಗಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರವನ್ನು ಮರಳಿ ತರಲು ಕರ್ನಾಟಕ ನಿರ್ಧರಿಸಿದೆ. ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಈ ಕಾರ್ಯಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರಿಗೆ ಅಭಿನಂದಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸಿದರು. ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲು ಅಪಾರ ಜನಸ್ತೋಮ ನೆರೆದಿರುವುದು ಕಂಡು ಬಂತು.

ಇದನ್ನೂ ಓದಿ: ದಾವಣಗೆರೆಯಲ್ಲಿ ಪ್ರಧಾನಿ ಮೋದಿ ರೋಡ್​ ಶೋ ವೇಳೆ ಭದ್ರತಾ ಲೋಪ

Last Updated : Mar 25, 2023, 11:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.