ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ನೂತನ ಸದಸ್ಯರು ಹಾಗೂ ಸೋತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಚಿಂತನ ಮಂಥನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಜನವರಿ 23 ರಂದು ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ನಾಳೆ ಸಂಜೆ 5 ಗಂಟೆಗೆ ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ, ಎಸ್. ಎಸ್. ಮಲ್ಲಿಕಾರ್ಜುನ್, ಕೆ. ಸಿ. ಕೊಂಡಯ್ಯ, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಸೇರಿದಂತೆ ನಾಯಕರು ಪಾಲ್ಗೊಳ್ಳಲಿದ್ದಾರೆ. ಪಕ್ಷದಿಂದ ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಹೇಗೆ ಕೆಲಸ ಮಾಡಬೇಕು. ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.