ದಾವಣಗೆರೆ: ಹೊನ್ನಾಳಿ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಮತ್ತೊಮ್ಮೆ ಗಮನ ಸೆಳೆದರು.
ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಮತ್ತು ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮಗಳಿಗೆ ಶಾಸಕ ರೇಣುಕಾಚಾರ್ಯ ತೆರಳುತ್ತಿದ್ದಾರೆ. ಈ ವೇಳೆ ಆಹಾರದ ಕಿಟ್ಗಳು ಹಾಗೂ ಮಾಸ್ಕ್ಗಳನ್ನು ವಿತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡುತ್ತಿದ್ದಾರೆ.
ಇನ್ನು, ಚಟ್ನಳ್ಳಿ ಗ್ರಾಮದ ಬಿಜೆಪಿ ಮುಖಂಡ ಬಿ. ಪಿ. ರವಿ ಅವರು ಹೊಸ ಟ್ರಾಕ್ಟರ್ ರನ್ನು ಖರೀದಿಸಿದ್ದರು. ಇಲ್ಲಿಗೆ ಭೇಟಿ ನೀಡಿದ ರೇಣುಕಾಚಾರ್ಯ ಅವರು ರವಿ ಅವರ ಅಪೇಕ್ಷೆಯ ಮೇರೆಗೆ ಟ್ರ್ಯಾಕ್ಟರ್ ಚಾಲನೆ ಮಾಡಿದರು.