ETV Bharat / state

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಅನ್ನೋ ಸುದ್ದಿ ಊಹಾಪೋಹ : ರೇಣುಕಾಚಾರ್ಯ - ಎಂ.ಪಿ.ರೇಣುಕಾಚಾರ್ಯ

ಸಚಿವ ಈಶ್ಬರಪ್ಪ ಹಾಗೂ ಸಿಎಂ ಯಡಿಯೂರಪ್ಪನವರ ಮಧ್ಯೆ ಮುಸುಕಿನ ಗುದ್ದಾಟದ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ..

ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ
author img

By

Published : Apr 2, 2021, 3:18 PM IST

ದಾವಣಗೆರೆ : ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಊಹಾಪೋಹ. ಯಾರೂ ರಾಜೀನಾಮೆ ನೀಡೋದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ತಿಳಿಸಿದರು.

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಬರೀ ಊಹಾಪೋಹವಷ್ಟೇ.. ಎಂ ಪಿ ರೇಣುಕಾಚಾರ್ಯ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಅಮಿತ್ ಶಾ, ಅರುಣ್ ಸಿಂಗ್ ಅವರು ಈಗಾಗಲೇ ಮಾತನಾಡಿದ್ದಾರೆ. ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ. ರಾಜ್ಯ ಉಸ್ತುವಾರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಲ್ಕು ಗೋಡೆಯ ಮಧ್ಯೆ ಕೂತು ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಈಗ ಏನಿದ್ರೂ ಉಪಚುನಾವಣೆಯನ್ನು ಗೆಲ್ಲುವ ಕಡೆಗೆ ಒಂದಾಗಿ ನಾವೆಲ್ಲ ಹೋಗುತ್ತೇವೆ, ಸಚಿವ ಈಶ್ಬರಪ್ಪ ಹಾಗೂ ಸಿಎಂ ಯಡಿಯೂರಪ್ಪನವರ ಮಧ್ಯೆ ಮುಸುಕಿನ ಗುದ್ದಾಟದ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.