ದಾವಣಗೆರೆ: ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ಪತ್ರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಿಎಂ ಸಿಟ್ಟಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ನಡೆಯಿತು.
'ಅದನ್ಯಾಕೆ ಚರ್ಚೆ ಮಾಡುತ್ತೀರಾ ಬಿಡಿ' ಎಂದು ಮುಖ್ಯಮಂತ್ರಿ ಗರಂ ಆದರು.
ಇನ್ನು ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ಧ. ನೂರಕ್ಕೆ ನೂರು ಗೆಲ್ಲುತ್ತೇವೆ ಎಂದರು.