ETV Bharat / state

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ನಾಳೆ ಸಿಎಂ ಯಡಿಯೂರಪ್ಪ ಪ್ರಚಾರ

ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಪರ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಲು ನಾಳೆ ದಾವಣಗೆರೆಗೆ ಆಗಮಿಸಲಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ
ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ
author img

By

Published : Oct 23, 2020, 2:31 PM IST

ದಾವಣಗೆರೆ: ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರದ ಕಣ ರಂಗೇರುತ್ತಿದೆ. ನಾಳೆ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಪರ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಲು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 11ಗಂಟೆಗೆ ಶಾಮನೂರು ಪಾರ್ವತಮ್ಮ‌ ಕಲ್ಯಾಣಮಂಟಪದ ಸಭಾಂಗಣದಲ್ಲಿ ಪ್ರಚಾರ ಸಭೆ ನಡೆಯಲಿದ್ದು, ಯಡಿಯೂರಪ್ಪ ಆಗಮಿಸುತ್ತಿರುವ ಕಾರಣ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಲಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ. ಸಂಸದರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು, ಪದವೀಧರರು ಸಭೆಯಲ್ಲಿ‌ ಪಾಲ್ಗೊಳ್ಳಲಿದ್ದಾರೆ ಎಂದರು.

ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಸೇರುವುದಿಲ್ಲ.‌ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ‌ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ರಾಜ್ಯ ಸರ್ಕಾರದ ಸಾಧನೆ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪದವೀಧರರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ‌. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದರು.

ಬಂಡಾಯದಿಂದ ಏನೂ ಆಗಲ್ಲ:
ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿ‌ ಮುಖಂಡ ಲೇಪಾಕ್ಷ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತುಕತೆ ನಡೆಸಲಿದ್ದು, ಯಾವುದೇ ಕ್ಷಣದಲ್ಲಿ ವಾಪಾಸ್ ಪಡೆಯುವ ಸಾಧ್ಯತೆ ಇದೆ‌. ಪಕ್ಷ ಯಾರಿಗೆ ಬಿ ಫಾರಂ ನೀಡುತ್ತೋ ಅವರೇ ಅಭ್ಯರ್ಥಿ.‌ ಕಾರ್ಯಕರ್ತರು ಯಾರ ಜೊತೆಗಿದ್ದರೂ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ. ಬಂಡಾಯವಾಗಿ ಯಾರೇ ಸ್ಪರ್ಧಿಸಿದರೂ ಸಮಸ್ಯೆ ಆಗಲ್ಲ. ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂಬುದು ಗಾಸಿಪ್ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.