ದಾವಣಗೆರೆ: ಜಿಲ್ಲೆಯಲ್ಲಿ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾಗಮ ತರಗತಿಗಳು ಆರಂಭವಾಗಲಿದೆ. 10ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳನ್ನು ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪಾಠ ಮಾಡಲು ಸಂಬಂಧಿಸಿದ ಶಿಕ್ಷಕರಿಗೆ ಕೊರೊನಾ ಪರೀಕ್ಷೆ ಮಾಡಲು ಸರ್ಕಾರ ಆದೇಶಿಸಿದೆ. ಇದರಿಂದ ಎಲ್ಲಾ ಶಿಕ್ಷಕ ಹಾಗೂ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಬೇಕಾಗಿದೆ ಎಂದು ಹೇಳಿದರು.
ಜನವರಿ ಒಂದರಿಂದ ವಿದ್ಯಾಗಮ ತರಗತಿಗಳು ಆರಂಭಿಸಲಾಗುತ್ತಿದ್ದು, ಇದರಿಂದ ಪ್ರತಿಯೊಂದು ಗ್ರಾಮೀಣ ಭಾಗದ ಶಾಲೆಗಳಿಗೆ ಸ್ಯಾನಿಟೈಸಿಂಗ್ ಮಾಡಿಸಲು ಆಯಾ ಗ್ರಾಪಂಗೆ ಜವಾಬ್ದಾರಿ ವಹಿಸಲಾಗಿದೆ. ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ಬಿಸಿ ನೀರು ತರುವುದು ಸೂಕ್ತ ಎಂದರು.