ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದನೆಗೆ ಸಂಬಂಧಿಸಿದಂತೆ ಮಂಗಳೂರಿನ ವಿಶ್ವ ಎಂಬಾತನ ಮೇಲೆ ಶುಕ್ರವಾರ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ. ಎಸ್.ಪಿ. ಹರ್ಷ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈತ ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಬರಹಗಳನ್ನು ಹಾಕಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಿನ್ನೆ(ಏ.17) ಪ್ರಕರಣ ದಾಖಲಾಗಿತ್ತು.

ಇಂತಹ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ವೀಟ್ ಮೂಲಕ ಮಂಗಳೂರು ಡಾ. ಪಿ.ಎಸ್. ಹರ್ಷ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.