ETV Bharat / state

ದಾವಣಗೆರೆ: ಶವ ಸಾಗಿಸಲು ಉಚಿತ ವಾಹನ ವ್ಯವಸ್ಥೆಗೆ ಆಗ್ರಹಿಸಿ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ - free vehicle

ದಾವಣಗೆರೆಯಲ್ಲಿ‌‌ ಕೊರೊನಾ ರೋಗದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಆದಷ್ಟು ಬೇಗ ವಿದ್ಯುತ್ ಚಿತಾಗಾರ ನಿರ್ಮಿಸಬೇಕೆಂದು ಒತ್ತಾಯಿಸಿ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Communist Party protests for free vehicle
ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ
author img

By

Published : Aug 24, 2020, 4:07 PM IST

ದಾವಣಗೆರೆ: ಶವ ಸಾಗಿಸಲು ಉಚಿತ ವಾಹನ ವ್ಯವಸ್ಥೆ ಕಲ್ಪಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ‌ ನಡೆಸಿದ ಪದಾಧಿಕಾರಿಗಳು, ದಾವಣಗೆರೆಯಲ್ಲಿ‌‌ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆದಷ್ಟು ಬೇಗ ವಿದ್ಯುತ್ ಚಿತಾಗಾರ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ

ಪಾಲಿಕೆ ವ್ಯಾಪ್ತಿಯ ಎರಡು ಕಡೆಗಳಲ್ಲಿ ಮೃತದೇಹಗಳ ದಹನಕ್ಕೆ ವಿದ್ಯುತ್ ಚಿತಾಗಾರ ನಿರ್ಮಿಸಬೇಕು. ಮೃತದೇಹ ಸಾಗಿಸಲು ಉಚಿತ ವಾಹನ ವ್ಯವಸ್ಥೆ ಮಾಡಬೇಕು. 1985 ರಲ್ಲಿ ನಗರಸಭೆಯಿಂದ ಉಚಿತವಾಗಿ ಗುಂಡಿ ತೋಡಿಕೊಡಲಾಗುತ್ತಿತ್ತು.‌ ಆದ್ರೆ, ಈಗ ಸಾವಿರಾರು ರೂ. ವಸೂಲಿ ಮಾಡಲಾಗುತ್ತಿದೆ. ಈ‌ ಹಿನ್ನೆಲೆ ಪಾಲಿಕೆಯಿಂದ ಈ ಎಲ್ಲ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಮೇಯರ್ ಅವರಿಗೆ ಮನವಿ ಅರ್ಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.