ದಾವಣಗೆರೆ : ಬಿಜೆಪಿ ವಿರುದ್ಧ ಸೂಟ್ ಕೇಸ್ ಹಿಡಿದು ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಕೋಟಿಗಟ್ಟಲೇ ಹಣ ಕೊಟ್ಟು ಕುದುರೆ ವ್ಯಾಪಾರ ಮಾಡುತ್ತಿದೆ. ಅಧಿಕಾರದ ಆಸೆಗೆ ಪ್ರಜಾಪ್ರಭುತ್ವವನ್ನೇ ಗಾಳಿಗೆ ತೂರುತ್ತಿದ್ದಾರೆ ಎಂದು ಯಡಿಯೂರಪ್ಪ ಅವರ ಭಾವಚಿತ್ರ ಹರಿದು ಹಾಕಿ ಸೂಟ್ ಕೇಸ್ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.