ದಾವಣಗೆರೆ : ಕಾಂಗ್ರೆಸ್ ಪಕ್ಷ ಒಂದು ಮುಳುಗುತ್ತಿರುವ ಹಡಗು. ಅದಕ್ಕೆ ನಾವಿಕನೇ ಇಲ್ಲ, ಆದ್ದರಿಂದ ಕಾಂಗ್ರೆಸ್ ನಿಂದಲೇ ಕೆಲವರು ಬಿಜೆಪಿಗೆ ಬರುತ್ತಿದ್ದಾರೆ ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿ, ಬಿಜೆಪಿಯಿಂದ ಯಾರೂ ಕೂಡ ಕಾಂಗ್ರೆಸ್ ಗೆ ಹೋಗುವುದಿಲ್ಲ. ಅದೊಂದು ಮುಳುಗುತ್ತಿರುವ ಹಡಗು. ಅಲ್ಲಿಗೆ ಯಾರು ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಗುಜರಾತ್ ಮಾಡೆಲ್ ಚುನಾವಣೆಯು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಮತ್ತೆ ಬಿಜೆಪಿ ಗೆದ್ದು ಅಧಿಕಾರ ಹಿಡಿಯುತ್ತದೆ. ಮತ್ತೆ ಡಬಲ್ ಇಂಜಿನ್ ಸರ್ಕಾರ ಬರುತ್ತದೆ ಎಂದು ರೇಣುಕಾಚಾರ್ಯ ವಿಶ್ವಾಸ ಭವಿಷ್ಯ ನುಡಿದರು.
ಅವಧಿಗೂ ಮುನ್ನವೇ ಸರ್ಕಾರ ವಿಸರ್ಜನೆಯಾಗುವ ಬಗ್ಗೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಮಾಹಿತಿ ನೀಡಿದ್ದಾರೆ. ಅವಧಿಗೂ ಮುನ್ನ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇಲ್ಲ. ಬಿಜೆಪಿ, ಸರ್ಕಾರದ ಅವಧಿ ಮುಗಿದ ನಂತರವೇ ಚುನಾವಣೆಗೆ ಹೋಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ :ರಾಜ್ಯದಲ್ಲಿ ಮತ್ತೆ ಬಿಜೆಪಿ ಹೆಚ್ಚು ಸೀಟುಗಳೊಂದಿಗೆ ಅಧಿಕಾರಕ್ಕೆ ಬರುತ್ತದೆ : ಸಚಿವ ಎಂಟಿಬಿ ನಾಗರಾಜ್