ETV Bharat / state

ಯೋಗಿ ಆದಿತ್ಯನಾಥ್​ ವಿರುದ್ಧ ದಾವಣಗೆರೆಯಲ್ಲಿ‌ ಕಾಂಗ್ರೆಸ್ ಪ್ರತಿಭಟನೆ - Uttar Pradesh CM

ಹಿಂದುಳಿದ ವರ್ಗದವರ ಮೇಲಿನ ದೌರ್ಜನ್ಯ ನಿಯಂತ್ರಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್​ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆಯಲ್ಲಿ‌ ಕಾಂಗ್ರೆಸ್ ಪ್ರತಿಭಟನೆ
ದಾವಣಗೆರೆಯಲ್ಲಿ‌ ಕಾಂಗ್ರೆಸ್ ಪ್ರತಿಭಟನೆ
author img

By

Published : Aug 24, 2020, 4:28 PM IST

ದಾವಣಗೆರೆ: ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಸಿಎಂ ಯೋಗಿ ಆದಿತ್ಯನಾಥ್ ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಎಸ್​ಸಿ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು‌.

ದಾವಣಗೆರೆಯಲ್ಲಿ‌ ಕಾಂಗ್ರೆಸ್ ಪ್ರತಿಭಟನೆ

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಯೋಗಿ ಆದಿತ್ಯನಾಥ್​​ ಪ್ರತಿಕೃತಿ ನಿರ್ಮಿಸಿ ಶವಯಾತ್ರೆಯ ಅಣುಕು ಮೆರವಣಿಗೆ ನಡೆಸಿದರು. ಬಳಿಕ ತಾಲೂಕು ಕಚೇರಿಯವರೆಗೆ ತೆರಳಿ ಮನವಿ ಸಲ್ಲಿಸಿದರು.

ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗದವರ ಮೇಲೆ ನಡೆಯುತ್ತಿರುವ ದಾಳಿ ತಡೆಯದೇ ಮೌನಕ್ಕೆ ಶರಣಾಗಿರುವುದು ಖಂಡನೀಯ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂದುಳಿದ ವರ್ಗದವರ ಮೇಲಿನ ದೌರ್ಜನ್ಯ ನಿಯಂತ್ರಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.