ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ (ಮಾಡಾಳು) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಿದೆ. ಈ ಮೂಲಕ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪನವರಿಗೆ ಸ್ವಂತ ಊರಿನಲ್ಲೇ ಮುಖಭಂಗವಾಗಿದೆ ಎಂದು ಹೇಳಲಾಗುತ್ತಿದೆ.
ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮ ಪಂಚಾಯಿತಿಯು ಒಟ್ಟು 15 ಜನ ಸದಸ್ಯರನ್ನು ಹೊಂದಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರ ಗಾದಿಗಾಗಿ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಕುಶಾಲ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಳೆದ 10 ವರ್ಷಗಳಿಂದ ಬಿಜೆಪಿ ಹಿಡಿತದಲ್ಲಿದ್ದ ಗ್ರಾಮ ಪಂಚಾಯತ್ ಇದೀಗ ಕಾಂಗ್ರೆಸ್ ಪಾಲಾಗಿದೆ. ಮುಂದೆ ಇದೇ ರೀತಿ ಚನ್ನಗಿರಿ ಕ್ಷೇತ್ರದಲ್ಲೂ ನಡೆಯುತ್ತದೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಸವಾಲು ಹಾಕಿದರು. ಕೈ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಬೈಕ್, ಸವಾರನ ರಕ್ಷಣೆ