ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಗೋಪನಾಳ್, ಹನುಮಂತ ನಗರ ಸೇರಿದಂತೆ ಹಲವು ಗ್ರಾಮಗಳಲ್ಲಿ ಎರಡು ಪುಂಡಾನೆಗಳ ಹಾವಳಿಯಿಂದ ಬೆಳೆ ನಾಶವಾಗುತ್ತಿತ್ತು. ಇದನ್ನು ತಡೆಗಟ್ಟಲು ಮಾದೇನಹಳ್ಳಿಯಿಂದ ಹರೋನಹಳ್ಳಿ, ಹನುಮಂತನಗರದವರೆಗೆ ಸುಮಾರು 19 ಕಿ.ಮೀವರೆಗೆ ಆನೆ ಕಂದಕಗಳ ನಿರ್ಮಿಸುವಂತೆ ಅರಣ್ಯ ಇಲಾಖೆಯಿಂದ ಸಲ್ಲಿಸಿದ್ದ ಪ್ರಸ್ತಾವನೆಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.
ಆನೆ ದಾಳಿ ನಡೆಸಿದ ಸ್ಥಳಕ್ಕೆ ಶಾಸಕ ಮಾಡಾಳು ವಿರುಪಾಕ್ಷಪ್ಪ ಹಾಗೂ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ದಾಳಿಯಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಕಾಡಿನಿಂದ ನಾಡಿಗೆ ಬಂದ ಆನೆಗಳಿಗೆ ಕಂದಕ ನಿರ್ಮಾಣ ಮಾಡಿರುವುದು ರೈತರು ಹಾಗೂ ಸಾರ್ವಜನಕರ ಆತಂಕವನ್ನು ಇದೀಗ ಕೊಂಚ ದೂರ ಮಾಡಿದೆ.