ETV Bharat / state

ದಾವಣಗೆರೆಯಲ್ಲಿ 86 ಮಂದಿಗೆ ವಕ್ಕರಿಸಿದ ಕೊರೊನಾ: ಸೋಂಕಿಗೆ ಓರ್ವ ಬಲಿ - ದಾವಣಗೆರೆ ಜಿಲ್ಲೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾದಿಂದ ಗುಣಮುಖವಾಗಿ 1,066 ಜನರು ಡಿಸ್ಚಾರ್ಜ್ ಆಗಿದ್ದಾರೆ. 865 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ತುರ್ತು ಚಿಕಿತ್ಸಾ ಘಟಕದಲ್ಲಿ 9 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ddsd
ದಾವಣಗೆರೆಯಲ್ಲಿ ಕೊರೊನಾ ಪ್ರಕರಣ
author img

By

Published : Jul 30, 2020, 9:29 PM IST

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ 86 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದು ಮೃತರ ಸಂಖ್ಯೆ 46ಕ್ಕೇರಿದೆ.

ತೀವ್ರ ಉಸಿರಾಟ, ಜ್ವರ, ಕಫದಿಂದ ಬಳಲುತ್ತಿದ್ದ ನಗರದ ಎನ್. ಆರ್. ಪೇಟೆಯ 50 ವರ್ಷದ ಪುರುಷ ಜುಲೈ 24ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಕೊರೊನಾ ಇರುವುದು ಖಚಿತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜುಲೈ 29 ರಂದು ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದಾವಣಗೆರೆಯಲ್ಲಿ 61, ಹರಿಹರ 8, ಜಗಳೂರು 2, ಚನ್ನಗಿರಿ 12, ಹೊನ್ನಾಳಿಯಲ್ಲಿ 2 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಒಬ್ಬರಿಗೆ ಕೊರೊನಾ‌ ವಕ್ಕರಿಸಿದೆ. ಸೋಂಕಿನಿಂದ 85 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.