ದಾವಣಗೆರೆ: ಹೊನ್ನಾಳಿ ಪಟ್ಟಣದ ಟಿ.ಎಂ. ರಸ್ತೆಯ ಹೊಳೆಮಠ ಕಾಂಪೌಂಡ್ ನಲ್ಲಿ ಒಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಅವರ ಮನೆ ಮತ್ತು ರಸ್ತೆ ಸೀಲ್ ಡೌನ್ ಮಾಡಲಾಗಿದೆ.
ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ತಾವೇ ಖುದ್ದಾಗಿ ನಿಂತು ಸೀಲ್ ಡೌನ್ ಮಾಡಿಸಿದರು.
ಹೊನ್ನಾಳಿ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಮನೆಯಿಂದ ಹೊರಬರಬಾರದು. ಅಗತ್ಯ ಕೆಲಸ ಇದ್ದರಷ್ಟೇ ಬನ್ನಿ. ಮಾಸ್ಕ್ ಕಡ್ಡಾಯವಾಗಿ ಧರಿಸಿ. ಸ್ಯಾನಿಟೈಸರ್ ಬಳಕೆ ಮಾಡಿ. ಕೊರೊನಾ ಹೆಮ್ಮಾರಿ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ರೇಣುಕಾಚಾರ್ಯ ಹೇಳಿದರು.