ಹರಿಹರ: ತಾಲೂಕು ಕಚೇರಿ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಕಚೇರಿಯನ್ನು ಬಂದ್ ಮಾಡಿ ಸ್ಯಾನಿಟೈಸರ್ ಸಿಂಪಡಿಸಲಾಯಿತು ಎಂದು ಕಂದಾಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಸಾರ್ವಜನಿಕ ಆಸ್ಪತ್ರೆಯ ಕೆಲ ಸಿಬ್ಬಂದಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಕೆಲ ಅಧಿಕಾರಿಗಳು ಹಾಗೂ ಕಾನ್ಸ್ ಟೇಬಲ್ಗಳಿಗೆ ಕೊರೊನಾ ಸೋಂಕು ಪತ್ತೆಯಾದ ಕಾರಣ ಆಸ್ಪತ್ರೆ ಮತ್ತು ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿತ್ತು. ಇದೀಗ ತಾಲೂಕು ಕಚೇರಿಯನ್ನು ಸಹ ಸೀಲ್ ಡೌನ್ ಮಾಡಲಾಗಿದೆ.