ದಾವಣಗೆರೆ: ಭಾಷಾ ನಗರ ಹಾಗೂ ಜಾಲಿನಗರದಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಮೂಲವನ್ನು ಸಿಡಿಆರ್ ವರದಿಯ ಮೂಲಕ ಪತ್ತೆ ಹಚ್ಚುವ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್.ಬೀಳಗಿ ತಿಳಿಸಿದರು.
ರೋಗಿ ಸಂಖ್ಯೆ 533ಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 26 ಹಾಗೂ ಎರಡನೇ ಸಂಪರ್ಕದಲ್ಲಿದ್ದ 49 ಜನರನ್ನು ಪತ್ತೆ ಹಚ್ಚಲಾಗಿದೆ. ಈ 75 ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದರು.
ಇವರನ್ನು ಇನ್ಸಿಟ್ಯೂಷನ್ ಕ್ವಾರಂಟೈನ್ ಮಾಡಿ, ಕ್ರಮ ಕೈಗೊಳ್ಳಲಾಗಿದೆ. ಈ ರೋಗಿ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕ ಹೊಂದಿರುವವರು 10 ಹಾಗೂ ಸೆಕೆಂಡರಿ ಸಂಪರ್ಕದಲ್ಲಿರುವವರು 12 ಜನರನ್ನು ಪತ್ತೆ ಹಚ್ಚಿದ್ದು, ಇವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು.
ಈ ರೋಗಿಗೆ ಸಂಬಂಧಿಸಿದ ಕಾಂಟಾಕ್ಟ್ ಟ್ರೇಸಿಂಗ್ ಇನ್ನೂ ಪ್ರಗತಿಯಲ್ಲಿದೆ. ಈ ಎರಡು ಪ್ರದೇಶಗಳನ್ನು ಕಂಟೇನ್ಮೆಂಟ್ ಝೋನ್ ಸ್ಥಾಪಿಸಿ, ಸರ್ವೇಕ್ಷಣಾ ಕ್ರಮಗಳನ್ನು ಸಹ ಕೈಗೊಂಡು ಸರ್ವೇ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.