ದಾವಣಗೆರೆ: ಜಿಲ್ಲೆಯಲ್ಲಿಂದು 209 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 13,834ಕ್ಕೆ ಏರಿಕೆಯಾಗಿದೆ.
ದಾವಣಗೆರೆ114, ಹರಿಹರ 42, ಜಗಳೂರು 3, ಚನ್ನಗಿರಿ 14, ಹೊನ್ನಾಳಿ 31 ಹಾಗೂ ಹೊರ ಜಿಲ್ಲೆಯಿಂದ ಬಂದ ಐವರಿಗೆ ಸೋಂಕು ತಗುಲಿದೆ. ಇಂದು 85 ಜನರು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ ಜಿಲ್ಲೆಯಲ್ಲಿ 10,733 ಮಂದಿ ಬಿಡುಗಡೆಯಾಗಿದ್ದಾರೆ.
ಸದ್ಯ 2,874 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.