ETV Bharat / state

ದಾವಣಗೆರೆಯಲ್ಲಿ ಓರ್ವ ವಿದ್ಯಾರ್ಥಿನಿ-ಮೂವರು ಶಿಕ್ಷಕರಿಗೆ ಕೊರೊನಾ

author img

By

Published : Jan 6, 2021, 2:50 PM IST

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೂರು ಜನ ಶಿಕ್ಷಕರ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

Davangere
ದಾವಣಗೆರೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿ ಮೂವರು ಶಿಕ್ಷಕರಿಗೆ ಕೊರೊನಾ

ದಾವಣಗೆರೆ: ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೆ ದಾವಣಗೆರೆ ತಾಲೂಕಿನ ವಸತಿ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಸೋಂಕು ದೃಢಪಟ್ಟಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಎಸ್​ಎಸ್ಎಲ್​​ಸಿ ಹಾಗೂ ಪಿಯುಸಿ ತರಗತಿಗಳು ಪ್ರಾರಂಭವಾದ ಹಿನ್ನೆಲೆ ಶಿಕ್ಷಕರಿಗೆ ಕೋವಿಡ್ ಟೆಸ್ಟ್ ಮಾಡಿಸಲು ಸೂಚಿಸಲಾಗಿತ್ತು. ಆದ್ದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷಾ ವರದಿ ಬಂದ ಬಳಿಕ ವಿದ್ಯಾರ್ಥಿನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಓದಿ: ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೂರು ಜನ ಶಿಕ್ಷಕರ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದು ತಲೆನೋವಾಗಿ ಪರಿಣಮಿಸಿದೆ ಎಂದು ಜಿಲ್ಲಾ ಸರ್ವೇಕ್ಷಣೆ ಅಧಿಕಾರಿ ಡಾ. ರಾಘವನ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.