ETV Bharat / state

ದಾವಣಗೆರೆಯ 53 ಮಂದಿ ಮಾಧ್ಯಮದವರ ಪರೀಕ್ಷಾ ವರದಿ ನೆಗೆಟಿವ್

ಮಾಧ್ಯಮಗಳಲ್ಲಿ ಕೆಲಸ ನಿರ್ವಹಿಸುವ ದಾವಣಗೆರೆ ಜಿಲ್ಲೆಯ 53 ಮಂದಿಯ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್​ ಎಂದು ಬಂದಿವೆ. ಇದರಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ನಿಟ್ಟುಸಿರು ಬಿಟ್ಟಿದ್ದಾರೆ.

Corona test
ಕೊರೊನಾ ಪರೀಕ್ಷೆ
author img

By

Published : Apr 27, 2020, 6:46 PM IST

ದಾವಣಗೆರೆ: ಜಿಲ್ಲೆಯಲ್ಲಿ ಸೋಂಕಿತ ಮೂವರು ಗುಣಮುಖರಾಗಿದ್ದು, ಮತ್ತೆ ಯಾವ ಪ್ರಕರಣ ದೃಢಪಟ್ಟಿಲ್ಲ. ಇನ್ನು ಮಾಧ್ಯಮದಲ್ಲಿ ಕೆಲಸ ನಿರ್ವಹಿಸುವ 53 ಮಂದಿಯ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಬಂದಿದೆ.

Corona test
ದಾವಣಗೆರೆಯ 53 ಮಂದಿ ಮಾಧ್ಯಮದವರ ವರದಿ ನೆಗೆಟಿವ್

ಕಳೆದ ಎರಡು ದಿನಗಳ ಹಿಂದೆ ಮಾಧ್ಯಮದವರ ಗಂಟಲು ದ್ರವ ಪರೀಕ್ಷೆಯನ್ನು ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ತೆಗೆದುಕೊಳ್ಳಲಾಗಿತ್ತು. 53 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಈಗ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಬಂದಿದೆ.

ಇದರಿಂದಾಗಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಮ್ಮು, ಶೀತ, ನೆಗಡಿ, ಕಫ, ಉಸಿರಾಟದ ಸಮಸ್ಯೆ ಸೇರಿದಂತೆ ಯಾವುದೇ ಲಕ್ಷಣ ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.