ದಾವಣಗೆರೆ: ಜಿಲ್ಲೆಯಲ್ಲಿ ಇಂದು 332 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 5785ಕ್ಕೇರಿದೆ.
ಕೊರೊನಾದಿಂದ ದಾವಣಗೆರೆ ನಗರದ ಪಿ.ಜೆ. ಬಡಾವಣೆಯ 65 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆ, ಹೈಪರ್ ಟೆನ್ಶನ್ ಸೇರಿದಂತೆ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ಆಗಸ್ಟ್ 17 ರಂದು ಬಾಪೂಜಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 130ಕ್ಕೇರಿದೆ.
ದಾವಣಗೆರೆಯಲ್ಲಿ 206, ಹರಿಹರ 42, ಜಗಳೂರು 25, ಚನ್ನಗಿರಿ 19, ಹೊನ್ನಾಳಿ 29 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ 11 ಮಂದಿಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. 45 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಪ್ರಸ್ತುತ 1868 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.
ಬೆಣ್ಣೆನಗರಿಗೆ ಮತ್ತೆ ಶಾಕ್..332 ಮಂದಿಯಲ್ಲಿ ಕೊರೊನಾ ಪಾಸಿಟಿವ್ - ಕೊರೊನಾ ಹೊಸ ಪ್ರಕರಣಗಳು
ದಾವಣಗೆರೆ ಜಿಲ್ಲೆಯಲ್ಲಿ ಇಂದು ಹೊಸ 332 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 1868 ಆಗಿದೆ.