ದಾವಣಗೆರೆ: ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸ ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ದಂಪತಿ ಇಂದು ಅಮವಾಸ್ಯೆ ಕಾರಣ ಶ್ರೀಕ್ಷೇತ್ರ ಉಕ್ಕಡಗಾತ್ರಿಗೆ ಪೂಜೆಗೆಂದು ತೆರಳುತ್ತಿದ್ದರು. ಈ ವೇಳೆ ನಗರದ ಹೊಸ ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಿವೈಡರ್ಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ಶಿವಪ್ರಕಾಶ್(43), ಉಮಾ(40) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಮವಾಸ್ಯೆ ಬಂದರೆ ಸಾಕು ಹರಿಹರ ತಾಲೂಕಿನ ಉಕ್ಕಡಗಾತ್ರಿಗೆ ತೆರಳಿ ಪೂಜೆ ಸಲ್ಲಿಸುವುದು ಸಾಮಾನ್ಯ. ಅದರಂತೆ ದಂಪತಿ ಉಕ್ಕಡಗಾತ್ರಿಗೆ ತೆರಳುತ್ತಿದ್ದಾಗ ಬೆಳಗಿನ ಜಾವ 5 ಗಂಟೆಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಮೃತ ಕುಟುಂಬದ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.