ದಾವಣಗೆರೆ: ಬೆಳ್ಳಂಬೆಳಗ್ಗೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಫೀಲ್ಡಿಗಿಳಿದು ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ರು.
ಜಿಲ್ಲೆಯ ಹೊನ್ನಾಳಿ ಪಟ್ಟಣದ ಎಪಿಎಂಸಿಗೆ ಭೇಟಿ ನೀಡಿ ಮಾಸ್ಕ್ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಕಾಪಾಡದೇ ಇದ್ದ ಜನರಿಗೆ ಕೋವಿಡ್ ಕುರಿತು ಜಾಗೃತಿ ಮೂಡಿಸಿದರು. ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಮರೆತಿದ್ದ ಜನರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಸೋಂಕು ಕುರಿತು ಜನರಿಗೆ ಜಾಗೃತಿ ಮೂಡಿಸಿ, ವರ್ತಕರಿಗೆ ನಿಯಮಗಳೊಂದಿಗೆ ವ್ಯಾಪಾರ ಮಾಡುವಂತೆ ಸೂಚಿಸಿದರು.
ಇದನ್ನೂ ಓದಿ: ಬಿಜೆಪಿ ನೇತೃತ್ವದ ಸ್ಕ್ಯಾಮ್ ಸರ್ಕಾರ ಕೋಮು ವಿಷಬೀಜ ಬಿತ್ತುತ್ತಿದೆ: ನಟ ಚೇತನ್
ಇನ್ನು ಜನರು ಸಾಮಾಜಿಕ ಅಂತರ ಕಾಪಾಡದೇ ಇದ್ದರೆ ಮಾರುಕಟ್ಟೆ ಬಂದ್ ಮಾಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು. ಸರ್ಕಾರದ ಮಾರ್ಗದರ್ಶನ ಪಾಲಿಸದೇ ಇದ್ದರೆ ಕಾನೂನು ಕ್ರಮ ತೆಗೆದುಕೊಳ್ಳೋದಾಗಿ ಎಚ್ಚರಿಕೆ ನೀಡಿದರು.