ದಾವಣಗೆರೆ : ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಅವರ ಮಗಳ ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವರದಿ ಕೇಳಿ ತಹಶೀಲ್ದಾರ್, ಸಿಪಿಐ ಹಾಗೂ ನಗರಸಭೆ ಕಮಿಷನರ್ಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೋಟಿಸ್ ನೀಡಿದ್ದಾರೆ.
ಶುಕ್ರವಾರ ( ಜೂನ್ 2) ಶಾಸಕ ರಾಮಪ್ಪ ಅವರ ಪುತ್ರಿಯ ಮದುವೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ನೂರಾರು ಜನರು ಜಮಾಯಿಸುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.
ಓದಿ : ಕಂದಾಯ & ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ 'ಗಿಚ್ಚಿ ಗಿಲಿಗಿಲಿ ಸ್ಟೆಪ್ಸ್': ಕೋವಿಡ್ ನಿಯಮ?
ಮದುವೆ ಕಾರ್ಯಕ್ರಮದಲ್ಲಿ ಕೇವಲ 40 ಜನರು ಭಾಗವಹಿಸಲು ಮಾತ್ರ ಹರಿಹರ ತಾಲೂಕು ಆಡಳಿತ ಅವಕಾಶ ನೀಡಿತ್ತು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ. ಈ ಸಂಬಂಧ ಕಾರಣ ಕೇಳಿ ಜಿಲ್ಲಾಧಿಕಾರಿಯು ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.