ದಾವಣಗೆರೆ: ಕೊರೊನಾ ನಿಯಮ ಉಲ್ಲಂಘಿಸಿದ ಶಾಸಕ ರೇಣುಕಾಚಾರ್ಯ ಅವರ ಮೇಲೆ ಪೊಲೀಸರಾಗಲಿ ಅಥವಾ ತಾಲೂಕು ಆಡಳಿತವಾಗಲಿ ಕ್ರಮ ಕೈಗೊಳ್ಳದೇ, ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದ ಆಯೋಜಕರ ವಿರುದ್ಧ ಮಾತ್ರ ಎಫ್ಐಆರ್ ದಾಖಲಿಸಿ ಹೊನ್ನಾಳಿ ಪೊಲೀಸರು ಕೈ ತೊಳೆದುಕೊಂಡಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಆಯೋಜನೆಗೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಶಾಸಕ ರೇಣುಕಾಚಾರ್ಯ ಪಾಲ್ಗೊಳ್ಳುವ ಮೂಲಕ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದರು. ಶಾಸಕ ರೇಣುಕಾಚಾರ್ಯ ಅವರ ಮೇಲೆ ಪ್ರಕರಣ ದಾಖಲಿಸದೆ, ಕೇವಲ ಹೋರಿ ಬೆದರಿಸುವ ಸ್ಪರ್ಧೆ ಆಯೋಜಕರ ಮೇಲೆ ಹೊನ್ನಾಳಿ ಪೊಲೀಸರು ಕೇಸ್ ದಾಖಲಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘನೆ: ಕ್ಷಮೆ ಯಾಚಿಸಿದ ರೇಣುಕಾಚಾರ್ಯ
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಹೆಸರು ಎಫ್ಐಆರ್ ನಲ್ಲಿ ನಾಪತ್ತೆಯಾಗಿದೆ. ಕರ್ನಾಟಕ ವಿಪತ್ತು ನಿರ್ವಹಣೆ ಕಾಯ್ದೆಯಡಿ ಪೊಲೀಸರಿಂದ ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಲಾಗಿದೆ.
ನಿನ್ನೆ ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿತ್ತು. ಹೋರಿ ಬೆದರಿಸುವ ಸ್ಪರ್ಧೆ ಆಯೋಜಕರು ಹಾಗೂ ಪಾಲ್ಗೊಂಡವರ ವಿರುದ್ಧ ದೂರು ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ.