ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ಭಾರತ್ ಕಾಲೋನಿಯಲ್ಲಿ ನಡೆದಿದೆ.
ಮೊಹಮದ್ ರಫಿಕ್, ಫಕ್ರುದ್ದೀನ್, ಬಾಲಕಿ ಸಾಹೀರಾ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಹಮದ್ ರಫಿಕ್ ಮನೆಯಲ್ಲಿ ಅನ್ನ ಮಾಡಲು ಸಿಲಿಂಡರ್ ಆನ್ ಮಾಡಲು ಮಂದಾದರು. ಈ ವೇಳೆ ಸ್ಫೋಟ ಸಂಭವಿಸಿದ ಪರಿಣಾಮ ಮೂವರಿಗೆ ಗಾಯಗಳಾಗಿವೆ. ಇವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.