ದಾವಣಗೆರೆ: ಜಿಲ್ಲೆಯಲ್ಲಿ ಇಂದು 288 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 15,920ಕ್ಕೆ ಏರಿಕೆಯಾಗಿದೆ.
ದಾವಣಗೆರೆಯಲ್ಲಿ123, ಹರಿಹರ 52, ಜಗಳೂರು 21, ಚನ್ನಗಿರಿ 34, ಹೊನ್ನಾಳಿಯಲ್ಲಿ 58 ಪ್ರಕರಣಗಳು ಖಚಿತವಾಗಿವೆ. ಇಂದು 1030 ಜನರ ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
152 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇದುವರೆಗೆ 12,736 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 2943 ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ. 241 ಮಂದಿ ಕೊರೊನಾಕ್ಕೆ ಬಲಿಯಾಗಿದ್ದಾರೆ.