ದಾವಣಗೆರೆ: ಜಿಲ್ಲೆಯಲ್ಲಿ 32 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 20,854ಕ್ಕೆ ಏರಿದೆ.
ದಾವಣಗೆರೆ 14, ಹರಿಹರ 8, ಚನ್ನಗಿರಿ 4 ಹಾಗೂ ಹೊನ್ನಾಳಿಯಲ್ಲಿ 6 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. 614 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.
77 ಜನರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 19,981 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.