ETV Bharat / state

Davanagere crime: ವೈದ್ಯರ ಮನೆಗೆ ಕನ್ನ; ₹22 ಲಕ್ಷ ನಗದು, ಚಿನ್ನಾಭರಣ ಕಳ್ಳತನ

Davanagere theft case: ವೈದ್ಯರ ಮನೆಗೆ ನುಗ್ಗಿದ ಕಳ್ಳರು ನಗದು ಹಾಗೂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.

thieves-stole-cash-and-jewellery-from-doctors-house-in-davanagere
ವೈದ್ಯರ ಮನೆ ಕನ್ನ: 22 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ದೋಚಿ ಕಳ್ಳರು ಪರಾರಿ
author img

By

Published : Aug 16, 2023, 3:50 PM IST

ದಾವಣಗೆರೆ : ವೈದ್ಯರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹರಿಹರ ನಗರದ ನಿವಾಸಿ ವೈದ್ಯ ಸಚಿನ್​ ಬೊಂಗಾಳೆ ಮನೆಯಲ್ಲಿ ಕಳ್ಳತನವಾಗಿದೆ. 22 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ.

ಆಗಸ್ಟ್ 11ರಂದು ಸಚಿನ್ ಬೊಂಗಾಳೆ ಕುಟುಂಬಸಮೇತ ಹರಿಹರದಿಂದ ಬೆಳಗಾವಿಗೆ ತೆರಳಿದ್ದರು. ಆಗಸ್ಟ್ 13ರಂದು ಹರಿಹರಕ್ಕೆ ಹಿಂದಿರುಗಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಮನೆಯನ್ನು ಪರಿಶೀಲಿಸಿದಾಗ 22 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಸಚಿನ್​ ಅವರು ಹರಿಹರ ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲಿಸರು ಪರಿಶೀಲನೆ ನಡೆಸಿದರು.

ಹರಿಹರ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗುರುತುಪಡಿಸಿಕೊಂಡು ಕೃತ್ಯಗಳನ್ನು ಎಸಗುತ್ತಿದ್ದಾರೆ.

ಮೂವರು ಮೊಬೈಲ್​, ಬೈಕ್​ ಕಳ್ಳರ ಬಂಧನ: ಕೋಲಾರ ನಗರದ ಗಲ್‌ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಕಳ್ಳರನ್ನು ಬಂಧಿಸಿದ್ಧ ಘಟನೆ ಇತ್ತೀಚೆಗೆ ನಡೆದಿತ್ತು. ಬಂಧಿತರಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ 30 ಬೈಕ್‌ಗಳು ಹಾಗೂ 3 ಲಕ್ಷ ಮೌಲ್ಯದ 50 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದರು. ಬಂಧಿತರನ್ನು ಕಾರಂಜಿಕಟ್ಟೆ ಬಡಾವಣೆ ನಿವಾಸಿಗಳಾದ ಸಂಜಯ್ ಮತ್ತು ಸೈಯದ್ ಇಮ್ರಾನ್ ಹಾಗೂ ಕುಂಬಾರಪೇಟೆ ನಿವಾಸಿ ನಂದಿ ಎಂದು ಗುರುತಿಸಲಾಗಿತ್ತು.

ಆರೋಪಿಗಳು ಕೋಲಾರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿದ್ದು, 10ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಕದ್ದು ಬೈಕ್​, ಮೊಬೈಲ್​ಗಳ ಬಿಡಿ ಭಾಗಗಳನ್ನು ಬದಲಾಯಿಸಿ ಮಾರಾಟ ಮಾಡುತ್ತಿದ್ದರು.

ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್​ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಗಳು, ಹೆಚ್ಚಾಗಿ ರಾಯಲ್ ಎನ್‌ಫೀಲ್ಡ್ ಸೇರಿದಂತೆ ಹೊಸ ಬೈಕ್​ಗಳನ್ನೇ ಕಳವು ಮಾಡುತ್ತಿದ್ದರು ಎಂದು ಎಸ್ಪಿ ನಾರಾಯಣ ತಿಳಿಸಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕವಾಗಿ ಗನ್​ ಹಿಡಿದು ಓಡಾಟ.. ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.