ETV Bharat / state

"ಕೋವಿಡ್ ಭಯ ಬೇಡ, ಎಚ್ಚರವಿರಲಿ'' ಜಾಗೃತಿ ಟ್ಯಾಬ್ಲೋಗೆ ಡಿಸಿ ಚಾಲನೆ

ದಾವಣಗೆರೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೋವಿಡ್-19 ಜಾಗೃತಿ ಟ್ಯಾಬ್ಲೋ ವಾಹನಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಚಾಲನೆ ನೀಡಿದರು.

Davanagere
Davanagere
author img

By

Published : Sep 30, 2020, 3:05 PM IST

ದಾವಣಗೆರೆ: ಕೋವಿಡ್ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ "ಕೋವಿಡ್ ಭಯ ಬೇಡ, ಎಚ್ಚರವಿರಲಿ'' ಜಾಗೃತಿ ಟ್ಯಾಬ್ಲೋ ವಾಹನಕ್ಕೆ ಜಿಲ್ಲಾಧಿಕಾರಿ‌ ಮಹಾಂತೇಶ್ ಆರ್. ಬೀಳಗಿ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಕೊರೊನಾ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಈ ವೇಳೆ‌ ಮಾತನಾಡಿದ ಡಿಸಿ, ಜಿಲ್ಲೆಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲಾಡಳಿತವು ಸೋಂಕು ಹರಡದಂತೆ ಸಾಕಷ್ಟು ಜಾಗೃತಿ ವಹಿಸುತ್ತಿದೆ. ಕೊರೊನಾ ವಾರಿಯರ್ಸ್, ವೈದ್ಯರು, ನರ್ಸ್ ಸೇರಿದಂತೆ ಎಲ್ಲರೂ ಶ್ರಮಿಸುತ್ತಿದ್ದಾರೆ. ಜನರು‌‌ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು‌.‌ ಇಲ್ಲದಿದ್ದರೆ ವೈರಾಣು ಹರಡುವುದನ್ನು ತಡೆಗಟ್ಟುವುದು ಅಸಾಧ್ಯ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಾ. ಮೀನಾಕ್ಷಿ, ಡಾ. ಸುರೇಶ್ ಬಾರ್ಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಅಶೋಕ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.