ETV Bharat / state

ದಾವಣಗೆರೆಯಲ್ಲಿ ಕರ್ತವ್ಯಲೋಪ ಎಸಗಿದ ಸಿಬ್ಬಂದಿ ಅಮಾನತು ಮಾಡಿ ಡಿಸಿ ಆದೇಶ - Danvanagere corona case

ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Davanagere
ದಾವಣಗೆರೆ
author img

By

Published : May 11, 2020, 10:11 PM IST

ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಚಕ್​​ಪೋಸ್ಟ್​​​​ಗೆ ನಿಯೋಜಿಸಲಾಗಿದ್ದ ಸಹ ಶಿಕ್ಷಕ ಮತ್ತು ದ್ವಿತೀಯ ದರ್ಜೆ ಸಹಾಯಕರನ್ನು ಕರ್ತವ್ಯ ಲೋಪ ಎಸಗಿದ ಕಾರಣ ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ ಅವರು ಅಮಾನತು ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಾವಣಗೆರೆಗೆ ವಿದೇಶಗಳಿಂದ, ಹೊರರಾಜ್ಯಗಳಿಂದ ಹಾಗೂ ಬೇರೆ ಜಿಲ್ಲೆಗಳಿಂದ ಬರುವ ವಾಹನಗಳನ್ನು ಮತ್ತು ಪ್ರಯಾಣಿಕರನ್ನು ತಪಾಸಣೆ ಮಾಡಲು ನಗರದಲ್ಲಿ ಚೆಕ್‍ಪೋಸ್ಟ್​​​​​​​ಗಳನ್ನು ಸ್ಥಾಪಿಸಿ ಆದೇಶಿಸಲಾಗಿತ್ತು. ಈ ಚಕ್‍ಪೋಸ್ಟ್ ನೋಡಲ್ ಅಧಿಕಾರಿಯಾಗಿ ಡಿಡಿಪಿಐ ಅವರನ್ನು ನೇಮಿಸಿದ್ದು, ಇವರು ಮೇ 5,6 ರಂದು ಚಕ್‍ಪೋಸ್ಟ್​​​​​​ಗೆ ಭೇಟಿ ನೀಡಿದ ವೇಳೆ ಮೋತಿ ವೀರಪ್ಪ ಪದವಿಪೂರ್ವ ಕಾಲೇಜಿನ ಸಹ ಶಿಕ್ಷಕ ಎಂ.‌ ನಾಗರಾಜ್ ಮತ್ತು ವಿಶ್ವಬಂಧು ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ವೆಂಕಟೇಶ್ ನಾಯ್ಕ ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.

ಕರ್ತವ್ಯಲೋಪ ಎಸಗಿದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆ 2005, ಐಪಿಸಿ ಕಲಂ 188, ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ಕರ್ನಾಟಕ ನಾಗರೀಕರ ಸೇವಾ ನಡತೆ ನಿಯಮಗಳು 1966 ಅನ್ವಯ ಇಬ್ಬರನ್ನೂ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಅಲ್ಲದೆ, ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಕೂಡಾ ಅವರು ಆದೇಶಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.