ETV Bharat / state

ದಾವಣಗೆರೆ: ಬಾಲಕಿ ಮೇಲೆ ಅತ್ಯಾಚಾರ, ಅಪರಾಧಿಗೆ 20 ವರ್ಷ ಜೈಲುಶಿಕ್ಷೆ - ಅಪ್ರಾಪ್ತ ಬಾಲಕಿ

Man gets 20 years in jail for raping minor girl: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಂಡ ಸಹಿತ ಜೈಲುಶಿಕ್ಷೆ ವಿಧಿಸಿ ಆದೇಶಿಸಿದೆ.

imprisonment
ಶಿಕ್ಷೆ
author img

By ETV Bharat Karnataka Team

Published : Nov 23, 2023, 6:58 AM IST

ದಾವಣಗೆರೆ: ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದ ಆರೋಪ ಸಾಬೀತಾದ ಪ್ರಕರಣದಲ್ಲಿ ವ್ಯಕ್ತಿಗೆ ದಾವಣಗೆರೆ ಜಿಲ್ಲಾ ಮತ್ತು ಸತ್ರ (ಎಫ್.ಟಿ.ಎಸ್.ಸಿ-1) ನ್ಯಾಯಾಲಯವು 17 ಸಾವಿರ ರೂಪಾಯಿ ದಂಡಸಹಿತ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಹರಿಹರ ತಾಲೂಕಿನ ವ್ಯಕ್ತಿ, ಬಾಲಕಿಯನ್ನು ಪುಸಲಾಯಿಸಿ ಬಸ್ಸಿನಲ್ಲಿ ಬಲವಂತವಾಗಿ ನೆರೆ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಕರೆದೊಯ್ದು ದುಷ್ಕೃತ್ಯ ಎಸಗಿದ್ದ. ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಶಿವಪ್ರಸಾದ್​.ಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಧೀಶ ಶ್ರೀಪಾದ.ಎನ್ ಅಪರಾಧಿಗೆ ಶಿಕ್ಷೆ ಪ್ರಕಟಿಸಿದರು.

ಸಂತ್ರಸ್ತೆಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಹಣ ನೀಡಬೇಕೆಂದು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಸುನಂದಾ ಐ.ಮಡಿವಾಳ್​ ಸಂತ್ರಸ್ತೆ ಪರ ವಾದ ಮಂಡಿಸಿದ್ದರು.

ಇದನ್ನೂ ಓದಿ: ಬಾಲಕಿಗೆ ಸಿಗರೇಟಿನಿಂದ ಸುಟ್ಟು ವಿಕೃತ ಆನಂದ, ಅತ್ಯಾಚಾರ: ಆರೋಪಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.