ದಾವಣಗೆರೆ : ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊನ್ನಾಳಿ-ನ್ಯಾಮತಿ ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ.
ವಿರೂಪಾಕ್ಷಪ್ಪ(45) ಸಾವನ್ನಪ್ಪಿರ ರೈತ. ಜಮೀನಿನಲ್ಲಿ ಕೆಲಸಕ್ಕೆಂದು ತೆರಳಿದ್ದಾಗ ಮಳೆ ಬಂದಿದ್ದು, ಈ ಸಮಯದಲ್ಲಿ ರೈತನಿಗೆ ಸಿಡಿಲು ಬಡಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ಸಿಡಿಲು ಬಡಿದು ರೈತ ಮರಣ ಹೊಂದಿದ ಸ್ಥಳಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ರಾಜ್ಯ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿ, ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಿದ್ದಾರೆ.