ದಾವಣಗೆರೆ: ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮನೆಯ ಟೆರೆಸ್ನಲ್ಲಿ ಹೂವಿನ ಕುಂಡಗಳಲ್ಲಿ ಅಕ್ರಮವಾಗಿ ಬೆಳೆದಿದ್ದ 52 ಗಾಂಜಾ ಗಿಡಗಳೊಂದಿಗೆ ಆರೋಪಿ ರಮೇಶ್ ಎಂಬಾತನನ್ನು ವಶಕ್ಕೆ ಪಡೆದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಬಕಾರಿ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಬಗೆಹರಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮನುಷ್ಯರು ಬದುಕಿದ್ದಾಗ ಅವರ ಉತ್ಸವಗಳು ನಡೆಯೋದಿಲ್ಲ: ಬಿ.ಸಿ.ಪಾಟೀಲ್ ವ್ಯಂಗ್ಯ