ದಾವಣಗೆರೆ: ಪಾಲಿಕೆ ಮೇಯರ್ ಚುನಾವಣೆ ಇಂದು ನಡಿಯಲ್ಲಿದ್ದು, ಸಾಕಷ್ಟು ತಂತ್ರ ಪ್ರತಿತಂತ್ರ ಹೆಣೆಯಲಾಗಿದೆ.
ಇಂದು ಮೇಯರ್ ಚುನಾವಣೆ ಇದ್ರೂ ರಾತ್ರೋರಾತ್ರಿ ಬಿಜೆಪಿ ಕಾಂಗ್ರೆಸ್ ಸದಸ್ಯನನ್ನು ಗಾಳ ಹಾಕಿ ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಳೆದ ಚುನಾವಣೆಯಲ್ಲಿ ಮೇಯರ್ ಅಭ್ಯರ್ಥಿಯಾಗಿದ್ದ ಕಾಂಗ್ರೆಸ್ನ ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಇರುವಾಗಲೇ ಶಿವಕುಮಾರ್ ರಾತ್ರಿ ಬಿಜೆಪಿ ಸೇರಿ ಕಾಂಗ್ರೆಸ್ಗೆ ಶಾಕ್ ನೀಡಿದರು. ದಾವಣಗೆರೆ ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಶ್ವ ಹಿಂದು ಪರಿಷತ್ನ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾದ ಶಿವಕುಮಾರ್ ದೇವರಮನೆ ಸಂಸದ ಜಿಎಂ ಸಿದ್ದೇಶ್ವರ್, ದಾವಣಗೆರೆ ಉತ್ತರ ಮತ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್, ಮೇಯರ್ ಅಜಯ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ದೇವರಮನೆ ಬಿಜೆಪಿ ಸೇರ್ಪಡೆಯಾಗಿರುವ ಮಾಹಿತಿಯನ್ನು ಆತನ ಸಹೋದರ ಸಂಬಂಧಿ ಗಿರೀಶ್ ದೇವರಮನೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಿಂದ ಈ ವಿಚಾರ ಬೆಳಕಿಗೆ ಬಂದಿದೆ.