ETV Bharat / state

ದಾವಣಗೆರೆ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿ ಆತ್ಮಹತ್ಯೆ! - ದಾವಣಗೆರೆ ಲೆಟೆಸ್ಟ್ ನ್ಯೂಸ್

ಪ್ರೌಢ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಶ್ರೀದೇವಿ ಹಾಗೂ ಪತಿ ನಡುವೆ ಮನೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿತ್ತು. ಇದರಿಂದ ಮನ ನೊಂದು ಶ್ರೀದೇವಿ ಸ್ಕೂಟಿಯಲ್ಲಿ ತನ್ನ ಮಕ್ಕಳನ್ನು ಕರೆದುಕೊಂಡು ಹೋಗಿ ಭದ್ರಾ ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ.

davanagere teacher committed to suiced with her children
ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿ ಆತ್ಮಹತ್ಯೆ ಅರೋಪ!
author img

By

Published : Oct 13, 2020, 10:27 AM IST

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ಕಾಲುವೆಗೆ ಹಾರಿ ತನ್ನ ಇಬ್ಬರು ಮಕ್ಕಳೊಂದಿಗೆ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಲ್ಪನಹಳ್ಳಿಯಲ್ಲಿ ನಡೆದಿದೆ.

32 ವರ್ಷದ ಶಿಕ್ಷಕಿ ಶ್ರೀದೇವಿ, 12 ವರ್ಷದ ಪುತ್ರ ನೂತನ್ ಹಾಗೂ 9 ವರ್ಷದ ಪುತ್ರಿ ಹಂಸಿಕಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರೌಢ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಶ್ರೀದೇವಿ ಹಾಗೂ ಅವರ ಪತಿ ನಡುವೆ ಮನೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿತ್ತು. ಇದರಿಂದ ಮನ ನೊಂದು ಸ್ಕೂಟಿಯಲ್ಲಿ ತನ್ನ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ವೇಲ್​​ನಿಂದ ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಭದ್ರಾ ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಮೃತದೇಹಗಳಿಗಾಗಿ ಹುಡುಕಾಟ ಆರಂಭಿಸಿದ್ದು, ಶವಗಳು ಸಿಕ್ಕಿವೆ. ಸದ್ಯ ಈ ಕುರಿತು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.