ದಾವಣಗೆರೆ: ಜಿಲ್ಲೆಯಲ್ಲಿ 203 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಒಟ್ಟು 12,295 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
142 ಜನರಲ್ಲಿ ಕೊರೊನಾ ಇರುವುದು ಖಚಿತವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 15,307ಕ್ಕೆ ಏರಿಕೆಯಾಗಿದೆ. ಇದುವರೆಗೆ 238 ಜನರು ಸೋಂಕು ತಗುಲಿ ಮೃತಪಟ್ಟಿದ್ದಾರೆ.
ಪ್ರಸ್ತುತ 2774 ಕೊರೊನಾ ಪಾಸಿಟಿವ್ ಇರುವವರು ಇದ್ದು, ಏಳು ಮಂದಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ.