ETV Bharat / state

ಕೋವಿಡ್ ನಿಯಂತ್ರಣಕ್ಕಾಗಿ ಗ್ರಾಮಗಳನ್ನು ದತ್ತು ಪಡೆಯಿರಿ: ಖಾಸಗಿ ವೈದ್ಯರಿಗೆ ದಾವಣಗೆರೆ ಡಿಸಿ ಮನವಿ

author img

By

Published : May 21, 2021, 8:22 AM IST

ಖಾಸಗಿ ಆಸ್ಪತ್ರೆಗಳ ವೈದ್ಯರು ಗ್ರಾಮಗಳನ್ನು ‌ದತ್ತು ಪಡೆದು ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗ ಪತ್ತೆ, ಚಿಕಿತ್ಸೆ ನಿರ್ಧರಣೆಗೆ ಸಹಕರಿಸುವ ಮೂಲಕ ಜಿಲ್ಲೆಯ ಋಣ ತೀರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಖಾಸಗಿ ವೈದ್ಯರಿಗೆ ದಾವಣಗೆರೆ ಡಿಸಿ ಮನವಿ
ಖಾಸಗಿ ವೈದ್ಯರಿಗೆ ದಾವಣಗೆರೆ ಡಿಸಿ ಮನವಿ

ದಾವಣಗೆರೆ: ಕೋವಿಡ್ ಸೋಂಕು ಗ್ರಾಮಮಟ್ಟದಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮಗಳನ್ನು ಖಾಸಗಿ ವೈದ್ಯರು ದತ್ತು ಪಡೆಯಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್ ಸೋಂಕಿತರ ಆರೋಗ್ಯ ಮೇಲ್ವಿಚಾರಣೆ ಮಾಡುವ ಸಂಬಂಧ ವೈದ್ಯರ ನಿಯೋಜನೆ ಕುರಿತಂತೆ ಕರೆದಿದ್ದ ಸಭೆಯಲ್ಲಿ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ 2ನೇ ಅಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಅನೇಕರು ನಮ್ಮ ಕಣ್ಣ ಮುಂದೆಯೇ ಮರೆಯಾಗುತ್ತಿದ್ದಾರೆ. ಸದ್ದಿಲ್ಲದೆ ಸೋಂಕು ಬಡವರು, ಶ್ರೀಮಂತರು, ನಿರ್ಗತಿಕರು ಎನ್ನದೆ ಬಹಳಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.