ETV Bharat / state

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ - ಮಹಾನಗರ ಪಾಲಿಕೆ ಚುನಾವಣೆ ಸುದ್ದಿ

ದಾವಣಗೆರೆ ಮಹಾನಗರ ಪಾಲಿಕೆಯ 45 ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
author img

By

Published : Nov 11, 2019, 6:22 PM IST

ದಾವಣಗೆರೆ: ಮಹಾನಗರ ಪಾಲಿಕೆಯ 45 ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು
377 ಬೂತ್ ಗಳನ್ನು ತೆರೆಯಲಾಗಿದ್ದು, ಇವಿಎಂ ಮತಯಂತ್ರಗಳಲ್ಲಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಒಟ್ಟು 208 ಅಭ್ಯರ್ಥಿಗಳ ಭವಿಷ್ಯವನ್ನು ಬೆಣ್ಣೆನಗರಿ ಮಂದಿ ಬರೆಯಲಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಅಕ್ರಮ ನಡೆಯದಂತೆ
ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತ ಚಲಾಯಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 28 ಅತಿ ಸೂಕ್ಷ್ಮ, 67 ಸೂಕ್ಷ್ಮ , 282 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ 521 ರೌಡಿಗಳನ್ನು ಗುರುತಿಸಿ, ಅವರ ಮೇಲೆ ಕ್ರಮಕ್ಕೆ ಮುಂದಾಗಲಾಗಿದೆ.

ಇನ್ನು ಜಿಲ್ಲಾ ದಂಡಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಇದುವರೆಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆಯಾಗಲೀ, ಅಕ್ರಮ ನಡೆದಿರುವ ಕುರಿತಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಜನರು ತಮ್ಮ ಮತ ಚಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ. 377 ಮಂದಿಯಿಂದ ಈಗಾಗಲೇ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಗಲಭೆ ನಡೆಯುವಂಥ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲ ಬೂತ್ ಗಳಲ್ಲಿಯೂ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. 21 ಸಬ್ ಇನ್ ಸ್ಪೆಕ್ಟರ್, 8 ಇನ್ ಸ್ಪೆಕ್ಟರ್, 176 ಹೋಂ ಗಾರ್ಡ್ಸ್ ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಭದ್ರತೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

Intro:KN_DVG_01_11_ELECTION SIDDATHE_SCRIPT_7203307

REPORTER : YOGARAJA G. H.

ಮಹಾನಗರ ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ - ಅಕ್ರಮ ನಡೆಯದಂತೆ ಹದ್ದಿನ ಕಣ್ಣು...!

ದಾವಣಗೆರೆ : ಮಹಾನಗರ ಪಾಲಿಕೆಯ 45 ಸ್ಥಾನಗಳಿಗೆ ನಾಳೆ ಅಂದರೆ ನವೆಂಬರ್ 12 ರಂದು ಮತದಾನ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು
377 ಬೂತ್ ಗಳನ್ನು ತೆರೆಯಲಾಗಿದ್ದು, ಇವಿಎಂ ಮತಯಂತ್ರಗಳಲ್ಲಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 208 ಅಭ್ಯರ್ಥಿಗಳ ಭವಿಷ್ಯವನ್ನು ಬೆಣ್ಣೆನಗರಿ ಮಂದಿ ಬರೆಯಲಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಎಲ್ಲಾ ಪಕ್ಷಗಳೂ ಪ್ರಚಾರ ಮುಗಿಸಿವೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಅಕ್ರಮ ನಡೆಯದಂತೆ
ಹದ್ದಿನ ಕಣ್ಣಿಟ್ಟಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಾಗಿಲ್ಲ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತ ಚಲಾಯಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಇನ್ನು ಈಗಾಗಲೇ ಎಲ್ಲಾ ಅಭ್ಯರ್ಥಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ಇದುವರೆಗೆ ಪ್ರಚಾರದ ಭರಾಟೆಯಲ್ಲಿ ಬ್ಯುಸಿಯಾಗಿದ್ದ ಉಮೇದುವಾರರು ಈಗ ಮತದಾರನ ಚಿತ್ತ ಯಾರತ್ತ ನೆಟ್ಟಿರಬಹುದು
ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಮಹಾನಗರ ಪಾಲಿಕೆಗೆ ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅತಿ ಸೂಕ್ಷ್ಮ 28, ಸೂಕ್ಷ್ಮ 67, ಸಾಮಾನ್ಯ 282
ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ 521 ರೌಡಿಗಳನ್ನು ಗುರುತಿಸಿ, ಅವರ ಮೇಲೆ ಕ್ರಮಕ್ಕೆ ಮುಂದಾಗಲಾಗಿದೆ.

ಇನ್ನು ಜಿಲ್ಲಾ ದಂಡಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಇದುವರೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆಯಾಗಲೀ, ಅಕ್ರಮ ನಡೆದಿರುವ ಕುರಿತಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂಬ
ಮಾಹಿತಿ ನೀಡಿದ್ದಾರೆ. ಜನರು ತಮ್ಮ ಮತ ಚಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

377 ಮಂದಿಯಿಂದ ಈಗಾಗಲೇ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಗಲಭೆ ನಡೆಯುವಂಥ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲಾ ಬೂತ್ ಗಳಲ್ಲಿಯೂ ಪೊಲೀಸ್ ಸಿಬ್ಬಂದಿ
ಕಾರ್ಯನಿರ್ವಹಿಸಲಿದ್ದಾರೆ. 21 ಸಬ್ ಇನ್ ಸ್ಪೆಕ್ಟರ್, 8 ಇನ್ ಸ್ಪೆಕ್ಟರ್, 176 ಹೋಂ ಗಾರ್ಡ್ಸ್ ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಭದ್ರತೆ ನಿಯೋಜಿಸಲಾಗಿದೆ.

ಬೈಟ್- 01

ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ

ಬೈಟ್- 02

ಹನುಮಂತರಾಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Body:KN_DVG_01_11_ELECTION SIDDATHE_SCRIPT_7203307

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.