ETV Bharat / state

ವಿಧಾನ ಪರಿಷತ್ ಚುನಾವಣೆ: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ - DC held meetings

ರಾಜ್ಯವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸಭೆ ನಡೆಸಿದರು.

DC meeting
DC meeting
author img

By

Published : Oct 1, 2020, 9:35 PM IST

ದಾವಣಗೆರೆ: ರಾಜ್ಯ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ರಾಜಕೀಯ ಪಕ್ಷದ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಜಿಲ್ಲಾಡಳಿತ ಕಚೇರಿಯಲ್ಲಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಚುನಾವಣೆ ಯಶಸ್ವಿಗೊಳಿಸಲು ರಾಜಕೀಯ ಪಕ್ಷಗಳ ಮುಖಂಡರು ಸಹಕರಿಸಬೇಕು ಎಂದರು.

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು 29 ಮತಗಟ್ಟೆಗಳಿದ್ದು, ಅದರಲ್ಲಿ ಹರಿಹರ ಹಾಗೂ ಜಗಳೂರಿನಲ್ಲಿ ತಲಾ 1, ದಾವಣಗೆರೆ ತಾಲೂಕಿನಲ್ಲಿ 27 ಮತಗಟ್ಟೆಗಳಿದ್ದು, ಒಂದು ಸಾವಿರಕ್ಕಿಂತ ಹೆಚ್ಚು ಮತದಾರರಿರುವ ಕಾರಣ 3 ಹೆಚ್ಚುವರಿ ಮತಗಟ್ಟೆಗಳನ್ನು ಮಾಡುವ ಬಗ್ಗೆ ರಾಜಕೀಯ ಮುಖಂಡರೊಂದಿಗೆ ಚರ್ಚಿಸಲಾಯಿತು. ಇದಕ್ಕೆ ರಾಜಕೀಯ ಪಕ್ಷದ ಮುಖಂಡರು ಮೌಖಿಕವಾಗಿ ಒಪ್ಪಿಗೆ ಸೂಚಿಸಿದರು.

ಅ. 8 ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನ. 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.12 ರಂದು ನಾಮಪತ್ರಗಳನ್ನು ಹಿಂಪಡೆಯುವ ದಿನವಾಗಿದೆ. ಅ.28 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನ.2 ರಂದು ಮತ ಎಣಿಕೆ ನಡೆಯಲಿದ್ದು,. ನ.5 ರಂದು ಚುನಾವಣೆ ಮುಕ್ತಾಯ ದಿನವಾಗಿದೆ.

ಆಯೋಗದ ನಿರ್ದೇಶನದಂತೆ ಈ ಬಾರಿ ಅಂಚೆ ಮತಪತ್ರಗಳನ್ನು ಹಿರಿಯ ನಾಗರಿಕರು (80 ವರ್ಷ ವಯೋಮಾನದ ಮೇಲ್ಪಟ್ಟವರು), ಕೋವಿಡ್-19 ಸೋಂಕಿತರು ಹಾಗೂ ವಿಕಲಚೇತನರು ಈ 3 ವರ್ಗದ ಮತದಾರರಿಗೆ ನೀಡಲಾಗುವುದು. ಈಗಾಗಲೇ ದಾವಣಗೆರೆ ಎಸಿ ಅವರನ್ನು ಕೋವಿಡ್-19 ಎಸ್‍ಓಪಿ ಅನುಷ್ಠಾನಗೊಳಿಸಲು ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ, ಅಂಚೆ ಮತಪತ್ರಗಳ ಕಾರ್ಯಕ್ಕೆ ಡಿಡಿಪಿಐ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.