ದಾವಣಗೆರೆ : ಸಾಕ್ಷ್ಯಾಧಾರಗಳಿಲ್ಲದೆ 15 ಸಾವಿರ ವೋಟ್ಗಳನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಆರೋಪಿಸಿದ್ದ ಹರಿಹರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಅವರಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ತಮ್ಮ ಕ್ಷೇತ್ರದಲ್ಲಿ 15 ಸಾವಿರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ನೀಡಿದ್ದ ಹೇಳಿಕೆ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ಬಗ್ಗೆ ಹರಿಹರ ತಹಶಿಲ್ದಾರ್ ಅವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ಶಾಸಕ ಎಸ್ ರಾಮಪ್ಪಗೆ ನೋಟಿಸ್ ನೀಡಲು ತಹಶಿಲ್ದಾರ್ ಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು, ಹರಿಹರ ಮತಕ್ಷೇತ್ರದಲ್ಲಿ 15 ಸಾವಿರ ಮತಗಳು ಡಿಲೀಟ್ ಆಗಿವೆ ಎಂದು ಮಾಧ್ಯಮಗೋಷ್ಟಿಯಲ್ಲಿ ಶಾಸಕ ಎಸ್ ರಾಮಪ್ಪ ಮಾತನಾಡಿದ್ದಾರೆ. ಈ ಬಗ್ಗೆ ಶಾಸಕರಿಗೆ ನೋಟಿಸ್ ನೀಡಲು ಹೇಳಲಾಗಿದೆ. ಯಾವುದೇ ಆಧಾರವಿಲ್ಲದೆ ಪತ್ರಿಕಾ ಹೇಳಿಕೆ ನೀಡುವುದು ಸರಿಯಲ್ಲ. ಈ ಬಗ್ಗೆ ಏನಾದರೂ ದಾಖಲೆ ಇದ್ದರೆ ಲಿಖಿತ ರೂಪದಲ್ಲಿ ದೂರು ನೀಡಲು ತಿಳಿಸಿರುವುದಾಗಿ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಇದನ್ನೂ ಓದಿ : ಮತದಾರರ ಮಾಹಿತಿ ಕಳವು ಪ್ರಕರಣ: ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ