ದಾವಣಗೆರೆ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯ ಕೇರ್ ಸೆಂಟರ್ ಪ್ರಾರಂಭಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮುಂದಾಗಿದ್ದಾರೆ.
ಇಎಸ್‍ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಮತ್ತು 40 ಐಸೊಲೇಷನ್ ಬೆಡ್‍ಗಳು ಸೇರಿದಂತೆ ಒಟ್ಟು 80 ಬೆಡ್‍ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಬೇಕಾದ ಅಗತ್ಯತೆಗಳ ಬಗ್ಗೆ ಅಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.
ಆಸ್ಪತ್ರೆಯಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆಗೆ 19 ಪಾಯಿಂಟ್ ಇವೆ. ಅದರಲ್ಲಿ 2 ಕಡೆ ಲೀಕೇಜ್ ಆಗುತ್ತಿದೆ. ಆಸ್ಪತ್ರೆಯಲ್ಲಿ ಓರ್ವ ಟೆಕ್ನಿಷಿಯನ್ ಇದ್ದು, ಇನ್ನೊಬ್ಬರ ಅಗತ್ಯವಿದೆ. ಬೆಡ್, ಸಿಲಿಂಡರ್ ವ್ಯವಸ್ಥೆ, ಫ್ಯಾನ್ ಸೇರಿದಂತೆ ಮೂಲ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲ ಕೊರತೆಯಿದೆ. ಸಾಧ್ಯವಾದಷ್ಟು ಜಿಲ್ಲಾಡಳಿತಕ್ಕೆ ಸಹಾಯ ಮಾಡಲು ನಾವು ಬದ್ಧರಿದ್ದೇವೆ ಎಂದು ಇಎಸ್‍ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಬಸವನಗೌಡ ತಿಳಿಸಿದರು.
ಇದನ್ನೂ ಓದಿ: ಲಸಿಕೆ ಖಾಲಿ, ಆಮ್ಲಜನಕ ಸಿಲಿಂಡರ್ ಒದಗಿಸಿ: ಸರ್ಕಾರಕ್ಕೆ ಫನಾ ಪತ್ರ